ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂ, ಡೀಸೆಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕೈಗೊಂಡಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಜೂ.17ರಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ.
ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿದ್ದು, ಜನಸಾಮಾನ್ಯರು, ಕಾರ್ಮಿಕರು, ಬಡವರು, ರೈತರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು ತಕ್ಷಣ ಈ ನಿರ್ಧಾರ ಹಿಂಪಡೆಯುವಂತೆ ಎಚ್ಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ವಿರೋಧ ಪಕ್ಷ ನಾಯಕರಾದ ಶ್ರೀ @RAshokaBJP, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ @drashwathcn, ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP, ರಾಜ್ಯ ಪ್ರಧಾನ ಕಾರ್ಯದರ್ಶಿ @PRajeevBJP, ರಾಜ್ಯ ಉಪಾಧ್ಯಕ್ಷರಾದ ಶ್ರೀ @BABasavaraja, ವಿಧಾನ ಪರಿಷತ್ ಸದಸ್ಯರಾದ ಶ್ರೀ @nrkbjp, ಶ್ರೀ ಛಲವಾದಿ ನಾರಾಯಣಸ್ವಾಮಿ, ಶ್ರೀ ಗೋಪಿನಾಥ್ ರೆಡ್ಡಿ, ಶಾಸಕರಾದ ಶ್ರೀ ರವಿ ಸುಬ್ರಹ್ಮಣ್ಯ, ಶ್ರೀ ಉದಯ್ ಗರುಡಾಚಾರ್, ಶ್ರೀ ರಘು, ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಎ.ಎಸ್.ಪಾಟೀಲ್ ನಡಹಳ್ಳಿ, ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಧೀರಜ್ ಮುನಿರಾಜು, ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಶ್ರೀ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶ್ರೀ ಸಿ.ಕೆ. ರಾಮಮೂರ್ತಿ, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.