ಬೆಂಗಳೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿಸಿಕೊಂಡಿರುವ ಸಾವಿರಾರು ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಭಾಗವಹಿಸಿ ಉದ್ಯೋಗಾಕಾಂಕ್ಷಿಗಳ ಅಹವಾಲು ಸ್ವೀಕರಿಸಿದರು. ಇದನ್ನೂ ಓದಿ :  ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಉದ್ಯೋಗಾಕಾಂಕ್ಷಿಗಳು

ರಾಜ್ಯ ಸರ್ಕಾರ ಯಾವೊಂದು ಇಲಾಖೆಯಲ್ಲೂ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡದ ಪರಿಣಾಮ ವಯೋಮಿತಿಯ ಆತಂಕದಲ್ಲಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಆತಂಕದಲ್ಲಿ ದಿನ ದೂಡುತ್ತಿದ್ದು ಈಗಲಾದರೂ ದಪ್ಪ ಚರ್ಮದ ಸರ್ಕಾರ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುವಂತೆ ಆಗ್ರಹಿಸಲಾಯಿತು. ಇದನ್ನೂ ಓದಿ :  ಉಕ್ರೇನ್ ಅಧ್ಯಕ್ಷರಾದ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಮಾತುಕತೆ
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶರಣು ಸಲಗರ್, ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಪ್ರಮುಖರು, ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.