ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ವತಿಯಿಂದ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಜೊತೆಗೂಡಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಾಗಿದ್ದು, ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ತಾರತಮ್ಯವೆಸಗಿರುವ ಬೇಜಾವಾಬ್ದಾರಿ ಸರ್ಕಾರದ ನಿಲುವುಗಳನ್ನು ಖಂಡಿಸಲಾಯಿತು. ಬೊಕ್ಕಸ ಬರಿದು ಮಾಡಿಕೊಂಡು ವಿಧಾನ ಸೌಧ ಖಾಲಿ ಮಾಡಿಕೊಂಡು ದೆಹಲಿ ಚಲೋ ನಾಟಕ ಮಾಡುತ್ತಿರುವ ಸರ್ಕಾರ ಮುಖ್ಯಮಂತ್ರಿಗಳ ಕಛೇರಿಗೆ ಬೀಗ ಜಡಿಯುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai , ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ R Ashoka , ಉಪ ನಾಯಕರಾದ ಶ್ರೀ @BelladArvind, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಶ್ರೀ Kota Srinivas Poojary , ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ Dr. Ashwath Narayan , ವಿಧಾನಪರಿಷತ್ ಮುಖ್ಯ ಸಚೇತಕ ಶ್ರೀ @nrkbjp, ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.