ಮಂಗಳವಾರ ರಾತ್ರಿ ನ್ಯಾನ್ಸಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಹರಿತವಾದ ಆಯುಧಗಳಿಂದ ಅವರನ್ನು ಇರಿಯಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾನ್ಸಿ ಗ್ರೆವಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ತೀಕ್ಷ್ಣ ಹೇಳಿಕೆ, ಪೋಸ್ಟ್ಗಳಿಂದ ಹೆಸರುವಾಸಿಯಾಗಿದ್ದರು. ಈವರೆಗೂ ಯಾವುದೇ ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆಯೇ? ಇಲ್ಲವೇ ಎಂಬುದನ್ನು ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ.
ಪೊಲೀಸರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸಮಯದಲ್ಲಿ ಮನೆಯ ಸುತ್ತಮುತ್ತ ಇದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ದಾಳಿಕೋರನ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಸ್ಥಳೀಯ ಜನರ ಸಹಾಯವನ್ನೂ ಕೇಳಿದ್ದಾರೆ ಎಂದು ವರದಿಯಾಗಿದೆ.
ಈ ದಾಳಿಯ ಹಿಂದೆ ಉಗ್ರಗಾಮಿಗಳ ಕೈವಾಡ ಇರಬಹುದೆಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ನ್ಯಾನ್ಸಿ ಗ್ರೆವಾಲ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನಿ (Khalistan) ಚಟುವಟಿಕೆಗಳನ್ನು ಹೆಚ್ಚಾಗಿ ಟೀಕಿಸುತ್ತಿದ್ದರು. ಈ ಕಾರಣದಿಂದಾಗಿ ಕೆಲವರಿಂದ ವಿರೋಧವೂ ಎದುರಿಸಿದ್ದರೆಂಬ ಮಾಹಿತಿ ಇದೆ.
