ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ  ಇದನ್ನೂ ಓದಿ :ವಿಶ್ವದ ದೊಡ್ಡ ಕಂಟೇನರ್‌ ಹಡಗು ವಿಳಿಂಜಂ ಬಂದರಿಗೆ ಆಗಮನ

ಬಂಟ್ವಾಳ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.  ಇದನ್ನೂ ಓದಿ :ನಾರಾಯಣಗುರುಗಳು ಸಾಮಾಜಿಕ ಕ್ರಾಂತಿಯ ದಾರಿದೀಪ – ಸಾಯಿ ಶಾಂತಿ ಕೋಕಾಲಗುತ್ತು

ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.