ನವದೆಹಲಿಯಲ್ಲಿ ಇಂದು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ Bhupender Yadav BJP ಅವರನ್ನು ಸಂಸದ ನಳಿನ್‌ ಕುಮಾರ್‌ ಕಟೀಲು ಭೇಟಿಯಾಗಿ ಮಂಗಳೂರಿನಲ್ಲಿರುವ ಇ.ಎಸ್.ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಮನವಿ ಸಲ್ಲಿಸಿದರು.

ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ಜಿಲ್ಲೆಯ ಶ್ರಮಿಕ ವರ್ಗಕ್ಕೆ ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾಡಿದ ನಮ್ಮ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆಯನ್ನೂ ನೀಡಿದ್ದಾರೆ.