ಬಂಟ್ವಾಳ: ಜನರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದನ್ನೂ ಓದಿ:ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ! Responding to people's problems: MLA accepts public petition - Rajesh Naikವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ವಸತಿ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಅಹವಾಲುಗಳನ್ನು ಆಲಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.