ಹೊಸ ನೇಮಕಾತಿ ಅಧಿಸೂಚನೆ 2024
Karnataka Revenue Department Recruitment 2024 – ಕರ್ನಾಟಕ ಆದಾಯ ಇಲಾಖೆ ನೇಮಕಾತಿ 2024 ರಲ್ಲಿ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ.
ಕರ್ನಾಟಕ ಆದಾಯ ಇಲಾಖೆ ನೇಮಕಾತಿ 2024 ರಲ್ಲಿ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.
ಇಲಾಖೆ ಹೆಸರು: ಕರ್ನಾಟಕ ಕಂದಾಯ ಇಲಾಖೆ – Karnataka Revenue Department Recruitment
ಹುದ್ದೆಗಳ ಹೆಸರು:ಗ್ರಾಮ ಲೆಕ್ಕಾಧಿಕಾರಿ ಒಟ್ಟು ಹುದ್ದೆಗಳು 1000 ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ
ವಯೋಮಿತಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಪ.ಜಾತಿ/ಪ.ಪಂ/ಪ್ರ1/ ಅಭ್ಯರ್ಥಿಗಳು ರೂ. 500/-
• 2ಎ,2ಬಿ,3ಎ,3ಬಿ, ಅಭ್ಯರ್ಥಿಗಳು ರೂ. 750/-
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳುಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಸೆಪ್ಟೆಂಬರ್ 2024
ಅರ್ಜಿ ಸಲಿಸಲು ಕೊನೆಯ: 29 ಸೆಪ್ಟೆಂಬರ್ 2024
ಪ್ರಾಧಿಕಾರದ ವೆಬ್ ಸೈಟ್ : http://kea.kar.nic.in ನಲ್ಲಿ ತೋರಿಸಿರುವ Village Administrative officer Recruitment-2024 ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.