ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ Dr. Radha Mohan Das Agrawal ಅವರ ಸಮ್ಮುಖದಲ್ಲಿ ಬೀದರ್, ಚಿಕ್ಕೋಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಅವಲೋಕನ ಸಭೆ ನಡೆಸಲಾಯಿತು.

ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಅವಲೋಕನ ಸಭೆ

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿನ ಕಾರಣಗಳನ್ನು ಅವಲೋಕಿಸಿ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಿರುವ ಪಕ್ಷದ ಕಾರ್ಯಕ್ರಮಗಳು, ಸಂಘಟನಾತ್ಮಕ ಚಟುವಟಿಕೆಗಳೂ ಸೇರಿದಂತೆ ಮುಂದಿನ ಹೋರಾಟಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ.ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @PRajeevBJP, ಶ್ರೀ @preethamgowda_j, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕ್ಷೇತ್ರವಾರು ಪ್ರಮುಖರು ಭಾಗವಹಿಸಿದ್ದರು.