ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇಲಾಖೆಯ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಕ್ರಮ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ಜ.30ರಂದು ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಿಂದಿಯಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ಯೋಗ ಎಂಬುದು ಸಾರ್ವಜನಿಕ ಸೇವೆ, ಸೇವೆಯನ್ನು ನಿಷ್ಠೆಯಿಂದ ಮನಃಪೂರ್ವಕವಾಗಿ ಮಾಡಿದಾಗ ದೇವರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ. ಶುಚಿತ್ವ ಮತ್ತು ಗುಣಮಟ್ಟವನ್ನು ಕಾಪಾಡಿಕೊಂಡು ಕೆಲಸ ಮಾಡುವುದು ನಮ್ಮ ಕರ್ತವ್ಯವಾಗಿದೆ.
ಸೇವೆ ಮಾಡುವ ಸ್ಥಳವನ್ನು ಸ್ವಂತ ಮನೆಯ ಭಾವನೆಯಿಂದ ನೋಡಿದಾಗ ಎಲ್ಲವೂ ಸರಿಯಾಗಿರುತ್ತದೆ. ಸಿಬ್ಬಂದಿಗಳಿಗೆ ಸಮಸ್ಯೆಗಳು ಬಂದಾಗ ತಿಳಿಸಿದರೆ ಪರಿಹಾರವನ್ನು ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಿಲಯ ಮೇಲ್ವಿಚಾರಕ ರಾದ ಭವಾನಿ, ಅಂಬುಜಾಕ್ಷಿ, ದೀಪಾ ಬಾಯಿ, ವಿಸ್ತರಣಾಧಿಕಾರಿ ನರಸಿಂಹ ಮೂರ್ತಿ, ಸಂಪನ್ಮೂಲ ವ್ಯಕ್ತಿ ಗಳಾಗಿ ನೋಣಯ್ಯ ಮತ್ತು ಅಬ್ದುಲ್ ಖಾದರ್ ಉಪಸ್ಥಿತರಿದ್ದರು.