ಬಂಟ್ವಾಳ: ವಿದ್ಯಾರ್ಥಿಗಳು ಎನ್.ಎಸ್.ಎಸ್. ಧ್ಯೇಯೋದ್ದೇಶಗಳನ್ನು ಅರ್ಥೈಸಿಕೊಂಡು ಅಳವಡಿಸಿಕೊಂಡಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬನಲ್ಲಿಯೂ ನಾಯಕತ್ವ ಗುಣವಿದೆ ಅದನ್ನು ಜಾಗೃತಗೊಳಿಸಲು ಎನ್.ಎಸ್.ಎಸ್. ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಈ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸಮಯ ಪ್ರಜ್ಞೆ, ಕರ್ತವ್ಯಪ್ರಜ್ಞೆ ಹಾಗೂ ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕೆಂದು ನಿವೃತ್ತ ಜಿಲ್ಲಾ ಆರೋಗ್ಯ ಪರಿವೀಕ್ಷಕರಾದ ಶ್ರೀ ಜಯರಾಮ ಪೂಜಾರಿ ಕರೆನೀಡಿದರು.
ಅವರು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ರಾ.ಸೇ.ಯೋಜನೆಯ ೨೦೨೪-೨೫ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್. ಎನ್.ಎಸ್.ಎಸ್. ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯರಾಗುವುದರಿಂದ ಸಾಮಾಜಿಕ ಜೀವನ ನಿರ್ವಹಣೆ, ಸಮಸ್ಯೆಗಳನ್ನು ಎದುರಿಸುವ ಆತ್ಮಸ್ಥೆöÊರ್ಯ ಬರುತ್ತದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಚಟುವಟಿಕೆಗಳು ಸಹಕಾರಿ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿಜೀವನದಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ನುಡಿದರು.
ವೇದಿಕೆಯಲ್ಲಿ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿ ನಾಯಕರಾದ ಮನೀಷ್ ಹಾಗೂ ಆಶಾಲತಾ ಉಪಸ್ಥಿತರಿದ್ದರು.
ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರಿ ಹೆಚ್.ವಿ. ಸ್ವಾಗತಿಸಿ, ಸಹಾಯಕ ಅಧಿಕಾರಿ ಶ್ರೀದೇವಿ ವಂದಿಸಿದರು. ಉಪನ್ಯಾಸಕರಾದ ಶ್ರೀ ಲಕ್ಷ್ಮಣ್ ನಿರೂಪಿಸಿ, ಹೇಮಲತಾ ಮತ್ತು ತಂಡ ಪ್ರಾರ್ಥಿಸಿದರು.