ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕಿ ಕು. ಶಾಖಾಂಬರಿ ಈಶ್ವರ ಹುಲ್ಯಾಳ ಅವರು ಧಾರವಾಡದಲ್ಲಿ ನಡೆಯುತ್ತಿರುವ 2024ನೇ ಜನವರಿ 24 ರಿಂದ 30 ರವರೆಗೆ ಕರ್ನಾಟಕ ವಿಶ್ವವಿದ್ಯಾಲಯ, ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ.

ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.