ರಿಯಾದ್: 20 ವರ್ಷಗಳ ಕಾಲ ಕೋಮಾದಲ್ಲಿದ್ದ (Coma) ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ (Saudi Arabia) ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ (Prince Alwaleed Bin Khaled) ನಿಧನರಾಗಿದ್ದಾರೆ. ಇದನ್ನೂ ಓದಿ : ಬೆಟ್ಟಿಂಗ್ ಆ್ಯಪ್ ಕೇಸ್; ನಟ ಪ್ರಕಾಶ್ ರಾಜ್ ಸೇರಿ ನಾಲ್ವರಿಗೆ ಇ.ಡಿ ಸಮನ್ಸ್
ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. 2005ರಲ್ಲಿ ಲಂಡನ್ ಮಿಲಿಟರಿ ಕಾಲೇಜಿನಲ್ಲಿ ಓದುವಾಗ ಅವರಿಗೆ ಅಪಘಾತವಾಗಿತ್ತು. ಅಂದಿನಿಂದ 20 ವರ್ಷಗಳ ಕಾಲ ಅವರು ಕೋಮಾದಲ್ಲಿದ್ದರು. ಇದನ್ನೂ ಓದಿ : ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ
ಅಬ್ದುಲಜೀಜ್ ಅವರು ಮಗನ ಮೇಲೆ ಹೊಂದಿದ್ದ ಕರುಣೆ ವಿಶ್ವದೆಲ್ಲೆಡೆ ಹಬ್ಬಿತ್ತು. ಅವನ ಸಾವು ಬದುಕು ದೇವರಿಚ್ಛೆ ಎಂದು ಅವರು ಹೇಳಿಕೊಂಡಿದ್ದರು.ಇದನ್ನೂ ಓದಿ : ಚರ್ಮದ ಕಾಂತಿ ಹೆಚ್ಚಿಸಲು ಬಳಸಿ A B C ಜ್ಯೂಸ್