ಬಂಟ್ವಾಳ ತಾಲೂಕಿನ ಗೋಳ್ತಮಜಲು ಸರಕಾರಿ ಪ್ರೌಢಶಾಲೆಯ 2024 – 2025 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ಟೈಲರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಹೊಸ ದಾಖಲಾತಿ ಆದಂತಹ ಮಕ್ಕಳನ್ನು ಬ್ಯಾಂಡ್ ಸೆಟ್ ನ ಮೂಲಕ ಶಾಲಾ ಆವರಣದಿಂದ ತರಗತಿ ಕೊಠಡಿಗೆ ಕರೆತರಲಾಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ. ಸದಸ್ಯರಾದ ಕೃಷ್ಣಪ್ಪ ಹಾಗೂ ಜಯಂತಿ ಉಪಸ್ಥಿತರಿದ್ದರು.

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು. 2024 ನೇ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಪ್ರೀತಿ ಅವರನ್ನು ಗೌರವಿಸಲಾಯಿತು.

2023 -24ನೇ ಸಾಲಿನ ವರ್ಷದಲ್ಲಿ ಅತಿ ಹೆಚ್ಚು ಹಾಜರಾತಿ ಇರುವಂತಹ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಶಾಲೆಯ ಚಟುವಟಿಕೆಯ ಬಗ್ಗೆ ಶಿಕ್ಷಕ ಚಿದಾನಂದ್ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ರಮೇಶ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಸುನಿತಾ ವಂದಿಸಿ, ಶಂಕರ್ ವೆಂಕಪ್ಪ ಪಾವಸ್ಕರ್ ಕಾರ್ಯಕ್ರಮವನ್ನು ನಿರೂಪಿಸಿದರು.

ಶಾಲಾ ಶಿಕ್ಷಕರು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.