ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್( ರಿ.) ಬಂಟ್ವಾಳ ತಾಲೂಕು ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶಂಭೂರು ಬೊಂಡಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಶಂಭೂರು ಪ್ರಗತಿ ಬಂದು ಸ್ವ- ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮದ ಬಗ್ಗೆ ಹಾಗೂ ಯೋಜನೆಯಲ್ಲಿ ಶಿಕ್ಷಣಕ್ಕೆ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜನಜಾಗೃತಿ ಸದಸ್ಯ ಪುರುಷೋತ್ತಮ ನಾಟಿ, ಅತಿಥಿ ಶಿಕ್ಷಕಿಯರಾದ ಕುಮಾರಿ ಹರ್ಷ, ಪ್ರಿಯ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕಮಲಾಕ್ಷಿ ಉಪಸಿತರಿದ್ದರು.
ಮೂರು ತಿಂಗಳು ಟ್ಯೂಷನ್ ಕ್ಲಾಸ್ ನಡೆಯಲಿದ್ದು ಸುಮಾರು 45 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿ ತಕ್ಷಿತ್ ಪ್ರಾರ್ಥನಾ ಗೀತೆ ಹಾಡಿದರು. ಸೇವಾ ಪ್ರತಿನಿಧಿ ಲಕ್ಷ್ಮಿ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕ ಕಮಲಾಕ್ಷರ ವಂದಿಸಿ, ವಲಯ ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.