ಆಚಾರ್ಯ ಶಂಕರ ಭಗವತ್ಪಾದರ ಜಯಂತ್ಯುತ್ಸವದ ಅಂಗವಾಗಿ ಜೂ.2 ರಂದು ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಾಂಕರ ತತ್ತ್ವ ಪ್ರಸಾರ ಅಭಿಯಾನ ಅಂಗವಾಗಿ ಭಜನೆ ಸೇವೆ ಕಾರ್ಯಕ್ರಮ ನಡೆಯಿತು.

ಶ್ರೀ ಶಂಕರ ಸೇವಾ ಪ್ರತಿಷ್ಠಾನ (ರಿ) ಕೋಟೆಕಾರು, ಮಂಗಳೂರು, ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನವ್, ಶ್ರೀ ಶೃಂಗೇರಿ ಮಠ ಶ್ರೀ ಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಘಟಕ ದ.ಕ., ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆದಿತ್ತು.

ಪ್ರತಿಷ್ಠಾನ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್, ಸಂಚಾಲಕ ಎ . ಕೃಷ್ಣ ಶರ್ಮ ಬಿ. ಸಿ.ರೋಡ್, ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ ಕಂದೂರು, ಜಗದೀಶ ಹೊಳ್ಳ ಮೊಡಂಕಾಪು, ರಮೇಶ್ ರಾವ್ ವಗ್ಗ ಮತ್ತು ಪ್ರಮುಖರು ಉಪಸ್ಥಿತರಿದ್ದರು.