ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಆಯೋಜಿಸಿದ್ದ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಮಹಾಪೀಠದ ಶ್ರೀ ಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದರು.
ಬಳಿಕ ಮಾತನಾಡಿ ಶ್ರೀಮಠದ ಭಾವೈಕ್ಯದ ರಥಯಾತ್ರೆ ಹಾಗೂ ಅಂಬಾರಿ ಉತ್ಸವ ನಮ್ಮ ಸಾಂಸ್ಕೃತಿಕ ಹಾಗೂ ಪರಂಪರೆಯ ವೈಭವವನ್ನು ಸಾರುವುದರ ಜೊತೆಗೆ ಭಾವೈಕ್ಯತಾ ಸಮಾಜ ಕಟ್ಟುವ ಕುರಿತು ಸಂದೇಶ ರವಾನಿಸಿ, ಧಾರ್ಮಿಕ ಜಾಗೃತಿಯನ್ನು ಮೂಡಿಸಿ ಜಗತ್ತಿನ ಗಮನ ಸೆಳೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀಮದ್ ನಿರಂಜನ ಜಗದ್ಗುರು ಡಾ. ಗುರುಸಿದ್ದರಾಜಯೋಗೀಂದ್ರ ಶ್ರೀಗಳು, ಪರಮಪೂಜ್ಯ ಫಕೀರ ದಿಂಗಾಲೇಶ್ವರ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ಸಚಿವರಾದ ಶ್ರೀ ಹೆಚ್.ಕೆ.ಪಾಟೀಲ್, ಶ್ರೀ ಎಂ.ಬಿ.ಪಾಟೀಲ್, ಶ್ರೀ ಈಶ್ವರ್ ಖಂಡ್ರೆ, ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.