ಸಿದ್ದಕಟ್ಟೆ : ವೃತ್ತಿ ನಿಷ್ಠೆಯಿಂದ ಸೇವೆ ಸಲ್ಲಿಸಸಿದ್ದಾಗ ಅಂತಹ ಅಧಿಕಾರಿಗಳು ಮತ್ತು ನೌಕರರು ತಮ್ಮ ಇಲಾಖೆಯಲ್ಲಿ ಹಾಗೂ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.
ಅವರು ಡಿ.27ರಂದು ಸಿದ್ದಕಟ್ಟೆ ಸಹಕಾರಿ ವ್ಯವಸಾಯ ಸಂಘದ ವತಿಯಿಂದ ರಾಯಿ ಪ್ರಾರ್ಥಮಿಕ ಅರೋಗ್ಯ ಕೇಂದ್ರದಲ್ಲಿ ವೈಧ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಕೋಲಾರ ಜಿಲ್ಲೆಗೆ ವರ್ಗಾವಣೆಗೊಂಡಿರುವ ಡಾ. ಮನೋನ್ಮಣಿ. ಜೆ. ಹಾಗೂ ಸಿದ್ದಕಟ್ಟೆ ಮೆಸ್ಕಾಂ ಶಾಖೆಯಲ್ಲಿ ನಿರಂತರವಾಗಿ 18 ವರ್ಷಗಳ ಕಾಲ ಲೈನ್ ಮೆನ್ ಆಗಿ ನಂತರ ಮೆಕಾನಿಕ್ -2 ಆಗಿ ಸೇವೆ ಸಲ್ಲಿಸಿ ಇದೀಗ ಮೆಕಾನಿಕ್ -1 ಹುದ್ದೆಗೆ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿರುವ ವೆಂಕಟೇಶ್ ಅವರನ್ನು ಸಂಘದ ಪ್ರಧಾನ ಕಚೇರಿಯ ʼ ಬಿ. ಕೃಷ್ಣ ರೈʼ ರೈತ ಸಭಾಂಗಣದಲ್ಲಿ ಅಭಿನಂದಿಸಿ ಮಾತಾನಾಡಿದರು.
ಗೌರವ ಸ್ವೀಕರಿಸಿ ಮಾತನಾಡಿದ ವೈದ್ಯಾಧಿಕಾರಿ ಮತ್ತು ಮೆಸ್ಕಾಂ ಅಧಿಕಾರಿಗಳು ನಾವು ಉತ್ತಮ ಸೇವೆ ಸಲ್ಲಿಸಲು ಈ ಭಾಗದ ಜನರು ಸಂಪೂರ್ಣ ಸಹಕಾರ ನೀಡಿರುವುದರಿಂದ ಹಾಗೂ ಇಲಾಖೆಯ ಇತರ ಸಿಬ್ಬಂದಿಗಳ ಸಹಭಾಗಿತ್ವ ದಿಂದಾಗಿ ಮಾತ್ರ ಸಾಧ್ಯವಾಯಿತು. ಇಲ್ಲಿನ ಎಲ್ಲಾ ಜನಪ್ರತಿನಿಧಿಗಳ ಸಹಕಾರವನ್ನು ಸ್ಮರಿಸುತ್ತ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸೇವೆ ಸಲ್ಲಿಸಲು ಸಿದ್ದಕಟ್ಟೆಯ ಜನಸಮೂಹ ಪ್ರೇರಣೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಅಲಕೆ, ನಿರ್ದೇಶಕ ಸಂದೇಶ್ ಶೆಟ್ಟಿ ಪೋಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ, ದೇವರಾಜ್ ಸಾಲಿಯಾನ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಮಂದಾರತಿ.ಎಸ್.ಶೆಟ್ಟಿ, ಅರುಣ ಎಸ್.ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಅರತಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿ, ವಂದಿಸಿದರು.