ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ನಡೆದ ಬೃಹತ್ ಕಾರ್ಯಕ್ರಮದಲ್ಲಿ ಸೌಮ್ಯ ರೆಡ್ಡಿಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಸಿ.ಎಂ.ಸಿದ್ಧರಾಮಯ್ಯ ಹಾಜರಿದ್ದು, ಶುಭ ಹಾರೈಸಿದರು.

ಕಾಂಗ್ರೆಸ್ ನ ತತ್ವ – ಸಿದ್ಧಾಂತಗಳು, ಸರ್ಕಾರದ ಸಾಧನೆಗಳನ್ನು ನಾಡಿನ ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ಸೌಮ್ಯ ರೆಡ್ಡಿಯವರಿಗೆ ನನ್ನ ಪೂರ್ಣ ಬೆಂಬಲ ಇರಲಿದೆ ಎಂದರು.