ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ಪ್ರಮುಖರ ವಿಶೇಷ ಸಭೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ರಾಜ್ಯಸಭಾ ಚುನಾವಣೆಯ ಕಾರ್ಯತಂತ್ರಗಳು ಹಾಗೂ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.‌ ಯಡಿಯೂರಪ್ಪ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಶ್ರೀ Dr. Radha Mohan Das Agrawal, ವಿರೋಧ ಪಕ್ಷ ನಾಯಕರಾದ ಶ್ರೀ ಆರ್ ಅಶೋಕ್‌, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್‌ ಬೊಮ್ಮಾಯಿ, ಶ್ರೀ ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ್‌, ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ Nalinkumar Kateel , ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ C T Ravi , ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Rajesh GV ಅವರುಗಳು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.