ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ನಿನಾದ್ ಕೈರಂಗಳ, ವಿಜಯಪುರದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಅವರು ಆಯೋಜಿಸಿದ್ದ ಭಗವದ್ಗೀತಾ ಅಭಿಯಾನ ಕರ್ನಾಟಕ 2024 ಕಾರ್ಯಕ್ರಮದಡಿಯಲ್ಲಿ ರಾಜ್ಯಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದ “ಭಗವದ್ಗೀತೆಯಿಂದ ಸಾಮಾಜಿಕ ಸಾಮರಸ್ಯ” ಎಂಬ ವಿಷಯದಲ್ಲಿ ಭಾಷಣವನ್ನು ಪ್ರಸ್ತುತಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ, ಶಾಲೆಗೆ ಕೀರ್ತಿಯನ್ನುತಂದಿದ್ದಾರೆ.
ಅವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಹಾಗೂ ಅಧ್ಯಾಪಕೇತರರು ಅಭಿನಂದಿಸಿದರು.