ಬಂಟ್ವಾಳ: ವಿಕಸಿತ ಭಾರತ ಕಲ್ಪನೆಯಲ್ಲಿ ವಿಜ್ಞಾನ ಸಂಶೋಧನೆಯು ಇಂದು ಪ್ರಾಮುಖ್ಯತೆ ಹೊಂದಿದೆ. ಪ್ರಸ್ತುತ ದಿನದಲ್ಲಿ ವಿದ್ಯಾರ್ಥಿಗಳು ಸಂವಿಧಾನಾತ್ಮಕವಾಗಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಅವಶ್ಯಕತೆಯಿದೆ ಎಂದು ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್. ಅವರು ಕರೆ ನೀಡಿದರು.
ಅವರು ಕಾಲೇಜಿನ ವಿಜ್ಞಾನ ವೇದಿಕೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಙಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜ್ಞಾನ ವೇದಿಕೆಯ ಅಧ್ಯಕ್ಷರು ಹಾಗೂ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿನಾಯಕ ಕೆ.ಎಸ್. ಸ್ವಾಗತಿಸಿ, ಸಿ.ವಿ.ರಾಮನ್ ಸಂಶೋಧನೆಯ ಪ್ರಾಮುಖ್ಯತೆ, ವಿಜ್ಞಾನಕ್ಷೇತ್ರದ ಅವರ ಸಾಧನೆಗಳ ಕುರಿತು ಮಾತನಾಡಿದರು.
ವಿಜ್ಞಾನ ವೇದಿಕೆಯ ಸಲಹೆಗಾರರು ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕು.ಶ್ರೀದೇವಿ ವಂದಿಸಿದರು. ಕೊನೆಯಲ್ಲಿ ಎಲ್ಲರಿಗೂ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಙಾವಿಧಿಯನ್ನು ಪ್ರಾಂಶುಪಾಲರು ಬೋಧಿಸಿದರು.