ಬಂಟ್ವಾಳ: ಸರ್ದಾರ್ ವಲ್ಲಭಾಯ್ ಪಟೇಲ್ರವರ ಜನ್ಮದಿನದ ಅಂಗವಾಗಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರಿ ಹೆಚ್.ವಿ. ಎಲ್ಲರನ್ನೂ ಸ್ವಾಗತಿಸಿ ಏಕತಾ ದಿನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸುಯೋಗವರ್ಧನ್ ಡಿ.ಎಮ್ ವಿದ್ಯಾರ್ಥಿಗಳಿಗೆ ಪ್ರತಿಜ್ಙಾವಿಧಿಯನ್ನು ಬೋಧಿಸಿದರು.
ವೇದಿಕೆಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶ್ರೀ ಶಿವಣ್ಣ ಪ್ರಭು ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಏಕತಾಜಾಥಾ ನೆರವೇರಿತು.