ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲಿ ಬರುವಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಅಧ್ಯಯನದ ಸಮಯದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ನಾರಾಯಣ ನಾಯಕ್ ಕರೆನೀಡಿದರು. ಇದನ್ನೂ ಓದಿ : ಚಹಾಗೆ ಇಲಿ ಪಾಷಾಣ ಬೆರೆಸಿ ಕುಡಿದು – ಪುತ್ರಿ ಸಾವು, ತಾಯಿ ಗಂಭೀರ
ಅವರು ಎಸ್.ವಿ.ಎಸ್. ಕಾಲೇಜಿನಲ್ಲಿ ನಡೆದ ೨೦೨೫-೨೬ನೇ ಶೈಕ್ಷಣಿಕ ವರ್ಷದ ಪುನಶ್ಚೇತನಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಇರುವಂತಹ ವಿದ್ಯಾರ್ಥಿವೇತನದ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಇದನ್ನೂ ಓದಿ : ಪವಿತ್ರ ಪಿಪ್ರಹ್ವಾ ಅವಶೇಷಗಳು 127 ವರ್ಷಗಳ ನಂತರ ತವರಿಗೆ ವಾಪಸ್ – ಪ್ರಧಾನಮಂತ್ರಿ ಸ್ವಾಗತ
ವೇದಿಕೆಯಲ್ಲಿ ಡಾ.ಕಾಶಿನಾಥ ಶಾಸ್ತಿç ಹೆಚ್.ವಿ. ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಎಂ.ಡಿ. ಮಂಚಿ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಿವಣ್ಣಪ್ರಭು ವಂದಿಸಿದರು.ಶ್ರೀಮತಿ ಅಖಿಲಾ ಪೈ ನಿರೂಪಿಸಿದರು.
ವಿದ್ಯಾರ್ಥಿನಿಯರಾದ ವಂದಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು.