ಬಂಟ್ವಾಳ: ವನಮಹೋತ್ಸವದ ಆಚರಣೆಯ ಪ್ರಯುಕ್ತ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳದಲ್ಲಿ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಕಾಶೀನಾಥ್ ಶಾಸ್ತ್ರಿ ಹೆಚ್.ವಿ. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ಭವಿಷ್ಯದ ಹಿತದೃಷ್ಟಿಯಿಂದ ಪರಿಸರ ಹಾಳಾಗದಂತೆ ರಕ್ಷಿಸುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಬೇಕು. ಪ್ರತಿಯೊಬ್ಬರು ತಮ್ಮ ಜೀವಿತಾವಧಿಯಲ್ಲಿ ಸಾಧ್ಯವಾದಷ್ಟು ವೃಕ್ಷಗಳನ್ನು ನೆಟ್ಟು ಪೋಷಿಸಿದರೆ ಪ್ರಕೃತಿಗೆ ನಾವು ಮಾಡುವ ಸಣ್ಣ ಸೇವೆಯಾಗುತ್ತದೆ ಎಂದರು.

ಮುಖ್ಯ ಶಿಕ್ಷಕ ಹರಿಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಬಂಗೇರ, ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ ಶ್ರೀಮತಿ ಹೇಮಲತಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕುಮಾರಿ ಪ್ರಣಮ್ಯ ವಿ. ಸ್ವಾಗತಿಸಿದರು, ಸ್ನೇಹಲ್ ಗಾಣಿಗ ವಂದಿಸಿ, ಕುಮಾರಿ ಧೃತಿ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿಧ್ಯಾರ್ಥಿಗಳಿಂದ ಪರಿಸರ ಜಾಗೃತಿ ಸಂಬಂಧಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.