ಬಂಟ್ವಾಳ: ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕು ಎಂದು ಪ್ರಾಂಶುಪಾಲರಾದ ಎಂ.ಡಿ.ಮಂಚಿ ನುಡಿದರು. ಇದನ್ನೂ ಓದಿ : ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯ – ಧನರಾಜ್ ಆಚಾರ್ಯ
ಅವರು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣರೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥಶಾಸ್ತಿç ಸ್ವಾಗತಿಸಿ, ನಿರೂಪಿಸಿದರು.

ಕೊನೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಬೋಧಿಸುವುದರೊಂದಿಗೆ ಸಂವಿಧಾನ ದಿನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.