ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ  ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್  ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.  ಇದನ್ನೂ ಓದಿ :ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ. ವಕೀಲ ಹೇಮಂತ್ ರಾಜ್, ಜಿ.ಆರ್.ಮೋಹನ್ ಕೂಡ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು. ಭದ್ರತಾ ಲೋಪವಾಗಿದೆ ಎಂದು ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ :ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣ

ಜನರ ಸಾವುನೋವಿನ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಿದ್ದೇವೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.