ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ ನಡೆದ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ :ಅಮರನಾಥ ಯಾತ್ರೆಗೆ ಉಗ್ರರ ದಾಳಿ ಭೀತಿ – ಭದ್ರತಾ ಪಡೆಗಳಿಂದ ʻಆಪರೇಷನ್ ಶಿವʼಆರಂಭ!
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಡೆದಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ :ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್ ದುರ್ಮರಣ
ಆರ್‌ಸಿಬಿ (RCB) ಗೆಲುವು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳಿಗೆ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.