ಸಾರ್ವಜನಿಕರ ಉಪಯೋಗಕ್ಕಾಗಿ ರಾಜ್ಯದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿಗಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ ಕೆಲಸದ ದಿನ ಮತ್ತು ರಜಾ ದಿನಗಳಂದೂ ಕಾರ್ಯ ನಿರ್ವಹಿಸಲಿವೆ.ಇದನ್ನೂ ಓದಿ :  ರಾಜ್ಯದಲ್ಲಿ ಕೊರೊನಾ ಹೆಚ್ಚಳ, ಸದ್ಯಕ್ಕೆ ಮಾಸ್ಕ್ ಕಡ್ಡಾಯ ಇಲ್ಲ: ಸಿದ್ದರಾಮಯ್ಯ

ಜೊತೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಾದ ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ದಾವಣಗೆರೆ ಉಪನೋಂದಣಾಧಿಕಾರಿಗಳ ಕಚೇರಿ, ರಾಮನಗರ ಉಪನೋಂದಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಉಪನೋಂದಣಾಧಿಕಾರಿಗಳ ಕಚೇರಿ, ತುಮಕೂರು ಜಿಲ್ಲೆಯ ಕುಣಿಗಲ್ ಉಪನೋಂದಣಾಧಿಕಾರಿಗಳ ಕಚೇರಿ, ಕೋಲಾರ ಉಪನೋಂದಣಾಧಿಕಾರಿಗಳ ಕಚೇರಿ, ಬೆಳಗಾವಿ ಜಿಲ್ಲೆಯ ಮೂಡಲಗಿ ಉಪನೋಂದಣಾಧಿಕಾರಿಗಳ ಕಚೇರಿ, ಬಾಗಲಕೋಟೆ ಜಿಲ್ಲೆಯ ಇಳಕಲ್ ಉಪನೋಂದಣಾಧಿಕಾರಿಗಳ ಕಚೇರಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಉತ್ತರ ಉಪನೋಂದಣಾಧಿಕಾರಿಗಳ ಕಚೇರಿ, ಗದಗ್ ಜಿಲ್ಲೆಯ ಗಜೇಂದ್ರಗಢ ಉಪನೋಂದಣಾಧಿಕಾರಿಗಳ ಕಚೇರಿ, ಕಾರವಾರ/ ಉತ್ತರಕನ್ನಡದ ಕುಮಟಾ ಉಪನೋಂದಣಾಧಿಕಾರಿಗಳ ಕಚೇರಿ, ಹಾವೇರಿ ಉಪನೋಂದಣಾಧಿಕಾರಿಗಳ ಕಚೇರಿ, ವಿಜಯಪುರ ಉಪನೋಂದಣಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ ಕುದೇರು ಉಪನೋಂದಣಾಧಿಕಾರಿಗಳ ಕಚೇರಿ, ಹಾಸನ ಜಿಲ್ಲೆಯ ಸಕಲೇಶಪುರ ಉಪನೋಂದಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆಯ ಮಡಿಕೇರಿ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಉಪನೋಂದಣಾಧಿಕಾರಿಗಳ ಕಚೇರಿ, ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಸಿಟಿ ಉಪನೋಂದಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆಯ ಮಳವಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಮೈಸೂರು ಜಿಲ್ಲೆಯ ಮೈಸೂರು ದಕ್ಷಿಣ ಉಪನೋಂದಣಾಧಿಕಾರಿಗಳ ಕಚೇರಿ, ಉಡುಪಿ ಉಪನೋಂದಣಾಧಿಕಾರಿಗಳ ಕಚೇರಿ, ಕೊಪ್ಪಳ ಜಿಲ್ಲೆಯ ಗಂಗಾವತಿ ಉಪನೋಂದಣಾಧಿಕಾರಿಗಳ ಕಚೇರಿ, ಬೀದರ್ನ ಉಪನೋಂದಣಾಧಿಕಾರಿಗಳ ಕಚೇರಿ, ಗುಲ್ಬರ್ಗಾ ಉಪನೋಂದಣಾಧಿಕಾರಿಗಳ ಕಚೇರಿ, ರಾಯಚೂರು ಉಪನೋಂದಣಾಧಿಕಾರಿಗಳ ಕಚೇರಿ, ಯಾದಗಿರಿ ಉಪನೋಂದಣಾಧಿಕಾರಿಗಳ ಕಚೇರಿ, ಬಳ್ಳಾರಿ ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಉಪನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.