ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನಲ್ಲಿ ಹಿರೇಹಳ್ಳ ಡ್ಯಾಂ ನಿರ್ಮಾಣಕ್ಕಾಗಿ ನಾಲ್ಕು ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಅವರಿಗೆ ಅಭಿನಂದನಾ ಪೂರಕವಾಗಿ, ಶಿರೂರು ಪುನರ್ವಸತಿ ಗ್ರಾಮದಲ್ಲಿ ನಿರ್ಮಿಸಿರುವ ಶ್ರೇಷ್ಠ ಜನಪರ ರಾಜಕಾರಣಿ ಮಾಜಿ ಸಚಿವರಾದ ದಿ. ಕೆ.ಹೆಚ್.ಪಾಟೀಲ್ ಅವರ ಪ್ರತಿಮೆಯನ್ನು  ಗೃಹ ಸಚಿವ ಡಾ| ಜಿ.ಪರಮೇಶ್ವರ್  ಲೋಕಾರ್ಪಣೆಗೊಳಿಸಿದರು. ಇದನ್ನೂ ಓದಿ : ದೊಡ್ಡ ದೊಡ್ಡ ಡ್ರೋನ್ ಬಳಸಿ ಹವಾಯ್‌ಗೆ ಸೊಳ್ಳೆಗಳ ಬಿಡುಗಡೆ – ಇಲ್ಲದಿದ್ರೆ ಈ ಪ್ರಭೇದವೇ ನಾಶವಾಗುತ್ತಂತೆ!
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಮಾಜಿ ಶಾಸಕರಾದ ಅಮರೇಗೌಡ ಬಯ್ಯಾಪುರ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ  ಗೃಹ  ಸಚಿವ  ಡಾ| ಜಿ.ಪರಮೇಶ್ವರ ಭೇಟಿ‌