ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಹತ್ಯೆ ಪ್ರಕರಣದ ತನಿಖೆಯನ್ನ ಎನ್‍ಐಎಗೆ (NIA) ಕೇಂದ್ರ ಗೃಹ ಇಲಾಖೆ ವಹಿಸಿದ್ದು, ಇದೀಗ ಎನ್‍ಐಎ ಅಧಿಕಾರಿಗಳ ತಂಡ ಅಖಾಡಕ್ಕಿಳಿದಿದೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್‍ಐಎ ಅಧಿಕಾರಿಗಳು ಇಂದು (ಜೂ.14) ಮಂಗಳೂರಿಗೆ (Mangaluru) ಆಗಮಿಸಿದ್ದಾರೆ. ಡಿಎಸ್‍ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‍ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್‍ಐಎ ತನಿಖೆಗೆ ವಹಿಸಿತ್ತು. ಇದನ್ನೂ ಓದಿ : ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲೆಯಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ”

ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‍ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.

ಸುಹಾಸ್ ಶೆಟ್ಟಿ ಹತ್ಯೆ ಕೇಸ್‍ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ : Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!