ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘ (ರಿ) ವಿದ್ಯಾಗಿರಿ, ಬಂಟ್ವಾಳ ಇವರ ಆಡಳಿತಕ್ಕೆ ಒಳಪಟ್ಟ ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟವು ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿ ಸೆ.19 ರಂದು ನಡೆಯಿತು.

ಈ ಸಮಾರಂಭವನ್ನು ಮಂಜುನಾಥನ್ ಎಂ.ಜಿ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಂಟ್ವಾಳ ಇವರು ಉದ್ಘಾಟಿಸಿ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಕ್ರೀಡೆಯು ಪ್ರಮುಖ ಪಾತ್ರವಹಿಸುತ್ತದೆ. ಕಲಿಕೆಯ ಜೊತೆಗೆ ಕ್ರೀಡೆಯು ಅತೀ ಮುಖ್ಯಎಂದರು.

ಸಭೆಯ ಅಧ್ಯಕ್ಷತೆಯನ್ನು ಡಾ.ಶ್ರೀ ಸುಯೋಗ ವರ್ಧನ ಡಿ.ಎಂ. ಪ್ರಾಂಶುಪಾಲರು ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜು ವಿದ್ಯಾಗಿರಿ ಬಂಟ್ವಾಳ ಮತ್ತು ಆಡಳಿತಾತ್ಮಕ ಪ್ರಾಂಶುಪಾಲರುಎಸ್.ವಿ.ಎಸ್. ಸಮೂಹ ಸಂಸ್ಥೆಗಳು ವಹಿಸಿದರು.

ಮುಖ್ಯ ಅಥಿತಿಗಳಾಗಿ ಶ್ರೀ.ರಾಜೇಂದ್ರರೈ ಅಧ್ಯಕ್ಷರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಶ್ರೀ. ಜಯರಾಮ ಅಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಶ್ರೀ. ಶಿವಪ್ರಸಾದ್ ರೈ ಕೆ.ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿಗಳು, ಶ್ರೀ ಸಂತೋಷ್‌ಕುಮಾರ್ ಮುಖ್ಯೋಪಾಧಾಯರು ಮೊಂಟೆಪದವು ಶಾಲೆ, ಶ್ರೀ ಹರಿಪ್ರಸಾದ್ ಮುಖ್ಯೋಪಾಧ್ಯಾಯರು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಹಾಗೂ ಶ್ರೀ ಮಹೇಶ್ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು ಎಸ್.ವಿ.ಎಸ್. ಪದವಿ ಪೂರ್ವ ಮತ್ತು ಪದವಿ ಕಾಲೇಜು ಇವರು ಉಪಸ್ಥಿತರಿದ್ದರು.

ಸುಮಾರು 15 ತಂಡಗಳು ಮೂರು ವಿಭಾಗದಲ್ಲಿ ಭಾಗವಹಿಸಿದರು.

ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿಯ ವಿದ್ಯಾರ್ಥಿಗಳು ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಸ್ಥಾನವನ್ನು ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟುರು ಪಡೆದುಕೊಂಡಿತು.
ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟುರು, ದ್ವಿತೀಯ ಸ್ಥಾನವನ್ನು ಮೊಂಟೆಪದವು ಸರಕಾರಿ ಪ್ರೌಢಶಾಲೆ ಬಂಟ್ವಾಳ ಪಡೆದುಕೊಂಡರು.

ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ದ್ವಿತೀಯ ಸ್ಥಾನವನ್ನು ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟುರು ಪಡೆದುಕೊಂಡಿತು.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ದ್ವಿತೀಯ ಸ್ಥಾನವನ್ನುದೇವಮಾತಾಆಂಗ್ಲ ಮಾಧ್ಯಮ ಶಾಲೆ ಅಮ್ಟುರು ಪಡೆದುಕೊಂಡಿತು.

ವಿಜೇತ ಮಕ್ಕಳಿಗೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿಗೌರವಿಸಲಾಯಿತು. ಕರ‍್ಯಕ್ರಮವನ್ನು ಶ್ರೀಯುತ ಹರಿಪ್ರಸಾದ ಸ್ವಾಗತಿಸಿ, ಶ್ರೀಮತಿ ಚಂದ್ರಿಕಾ ಬಿ.ಆರ್.ಎಂ.ಪಿ. ಶಾಲೆಯ ಶಿಕ್ಷಕರು ನಿರೂಪಿಸಿ, ಶ್ರೀ ಮಹೇಶ್ ಶೆಟ್ಟಿದೈಹಿಕ ಶಿಕ್ಷಣ ಶಿಕ್ಷಕರು ಎಸ್.ವಿ.ಎಸ್. ಪದವಿ ಪೂರ್ವ ಮತ್ತು ಪದವಿ ಕಾಲೇಜು ವಂದಿಸಿದರು.