ಬಂಟ್ವಾಳ, ಸೆ.30: ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು, ಮಂಗಳೂರು ಇಲ್ಲಿ ನಡೆದದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಸ್ವಾಮೀಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿಯ ವಿದ್ಯಾರ್ಥಿನಿಯಾರಾದ ತನ್ವಿ.ಪಿ.ಸುವರ್ಣ ಮತ್ತು ಶಿರಾಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಆವರಿಗೆ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ , ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕರಾದ ಕೆ. ರೇಖಾ ಶೆಣೈ, ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.