ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ನಡೆದ ‘ಟೆಕ್ನೋಡಿಯಾ-2024’ ರಾಷ್ಟ್ರೀಯ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಮಾದರಿ ಪ್ರದರ್ಶನ ಹಾಗೂ ಸ್ಪರ್ಧೆ ಕಾರ್ಯಕ್ರಮವನ್ನು ಗೃಹ ಸಚಿವ ಡಾ| ಜಿ.ಪರಮೇಶ್ವರ  ಉದ್ಘಾಟಿಸಿದರು. ಇದನ್ನೂ ಓದಿ :ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಜನರ ವಿರುದ್ಧ ಎಫ್‌ಐಆರ್; ಕೇಸ್ ವಾಪಸ್ ಪಡೆಯಲು ಬಿಜೆಪಿ ಒತ್ತಾಯ
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಆರೋಗ್ಯ, ಕೃಷಿ, ಬಾಹ್ಯಾಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನವು ಪ್ರತಿನಿತ್ಯ ಗಣನೀಯವಾಗಿ ಆವಿಷ್ಕಾರವಾಗುತ್ತಿದೆ. ಕರ್ನಾಟಕದಲ್ಲಿ ಸಾಕಷ್ಟು ನವೋದ್ಯಮಗಳು ಆರಂಭವಾಗುತ್ತಿದ್ದು, 2027ರ ವೇಳೆಗೆ 21 ಸಾವಿರ ನವೋದ್ಯಮಗಳು ಪ್ರಾರಂಭವಾಗಬೇಕು ಎಂಬ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.
ರಾಜ್ಯ ಅತಿಹೆಚ್ಚು ನವೋದ್ಯಮ ಕಂಪನಿಗಳನ್ನು ಹೊಂದಿದೆ. ವಿದ್ಯಾರ್ಥಿಗಳ ಸಂಶೋಧನಾತ್ಮಕ ಅಧ್ಯಯನದಿಂದ ಡೀಪ್‌ ಟೆಕ್ನಾಲಜಿ ತಂತ್ರಜ್ಞಾನದ ಬೆಳವಣಿಗೆಯಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಪ್ರಕಟ ಮಾಡಿದರೆ, ಸಂಶೋಧನೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಸಹಕಾರವಾಗುತ್ತದೆ. ಡೀಪ್‌ಟೆಕ್ ಟೆಕ್ನಾಲಜಿ ಪ್ರಸ್ತುತ ಅಗತ್ಯವಾಗಿದ್ದು, ಇದಕ್ಕೆ ಕರ್ನಾಟಕ ಸರಕಾರವು ಅನುದಾನ ನೀಡಿ ಸಹಕರಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ :ಇಂದಿನ ವೈಜ್ಞಾನಿಕ ಯುಗದಲ್ಲಿ ಶೈಕ್ಷಣಿಕವಾಗಿ ಬೆಳೆದ ಮಗು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯಲಾರ -ಮಂಜುನಾಥನ್ ಎಂ. ಜಿ.
ಬೆಂಗಳೂರಿನ ಸಿ-ಕ್ಯಾಂಪ್ ಸಂಸ್ಥೆಯ ಸಿಇಒ ಮತ್ತು ನಿರ್ದೇಶಕರಾದ ಡಾ. ತಸ್ಲಿಮರಿಫ್ ಸೈಯದ್, ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಡಾ. ಅಶೋಕ್ ಮೆಹ್ತಾ, ಎಸ್‌ಎಸ್‌ಐಟಿ ಪ್ರಾಂಶುಪಾಲ ಡಾ. ಎಂ.ಎಸ್.ರವಿಪ್ರಕಾಶ್, ಟೆಕ್ನೋಡಿಯಾ ಸಂಯೋಜಕ ಡಾ. ಮನು ಎಸ್. ಮುಂತಾದವರು ಉಪಸ್ಥಿತರಿದ್ದರು.