ಹಸಿರು ಬೆಂಗಳೂರು’, ‘ಡ್ರಗ್ಸ್ ಮುಕ್ತ ಕರ್ನಾಟಕ’, ‘ಸೈಬರ್ ಅಪರಾಧ’ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ‌ ಹೆಮ್ಮೆ’ ಘೋಷವಾಕ್ಯದಡಿ ಆಯೋಜಿಸಿದ್ದ 3ನೇ ವರ್ಷದ ‘ಪೊಲೀಸ್ ಓಟ’ (ಕರ್ನಾಟಕ ಪೊಲೀಸ್ ರನ್) ಸ್ಪರ್ಧೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು  ಚಾಲನೆ ನೀಡಿದರು. ಇದನ್ನೂ ಓದಿ :ಆರೋಗ್ಯತ್ಮಕ ಸಮಾಜ ಕಟ್ಟುವಲ್ಲಿ ಮಹಿಳೆಯ ಪಾತ್ರ ಬಹಳ ಮುಖ್ಯವಾಗಿದೆ – ಸಾದ್ವಿ ಶ್ರೀ ಶ್ರೀ ಮಾತಾನಂದಮಯೀ
10 ಕಿ.ಮೀ ಮತ್ತು 5 ಕಿ.ಮೀ. ಓಟದ ಸ್ಪರ್ಧೆಯಲ್ಲಿ 12 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡು ಯಶಸ್ವಿಗೊಳಿಸಿದರು. ಮ್ಯಾರಥಾನ್‌ನಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದೆ.
ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಜಿಬಿಎ ಆಯುಕ್ತರಾದ ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಎಸ್‌ಬಿಐ ಬೆಂಗಳೂರು ವಲಯ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಹಾಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.