ದೆಹಲಿ ಜನವರಿ 22: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram mandir) ಭಗವಾನ್ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೂರ್ಯೋದಯ ಯೋಜನೆಯನ್ನು(Pradhan Mantri Suryoday Yojana) ಘೋಷಿಸಿದ್ದಾರೆ.

ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ರೂಫ್‌ಟಾಪ್ ಸೋಲಾರ್ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದರು.

ದೇಶವಾಸಿಗಳು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ಸೌರ ವ್ಯವಸ್ಥೆಯನ್ನು ಹೊಂದಬೇಕು ಎಂಬ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್ ಸೋಲಾರ್ ಅಳವಡಿಸಲಾಗುವುದು. ಇದರಿಂದ ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದಿದ್ದಾರೆ.

ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಂದರ್ಭದಲ್ಲಿ ಭಾರತದ ಜನರು ತಮ್ಮ ಮನೆಗಳ ಮೇಲ್ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ ಎಂದು ಸಾಮಾಜಿಕ ವೇದಿಕೆ X ನಲ್ಲಿ ಮೋದಿ ಬರೆದಿದ್ದಾರೆ.

ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಇಲ್ಲಿ ಅಧಿಕಾರಿಗಳೊಂದಿಗೆ ಯೋಜನೆಯ ಕುರಿತು ಚರ್ಚಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.