ಬೆಂಗಳೂರಿನ ಹಲಸೂರು ಕೆರೆ ಸಮೀಪವಿರುವ ಸಂತ ಕವಿ ತಿರುವಳ್ಳುವರ್ ಉದ್ಯಾನವನದಲ್ಲಿ ಶ್ರೀ ತಿರುವಳ್ಳವರ್ ಪ್ರತಿಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಲಾರ್ಪಣೆ ಮಾಡುವ ಮೂಲಕ ಜನ್ಮಸ್ಮರಣೆಯ ಗೌರವ ನಮನ ಸಲ್ಲಿಸಿದರು.
ಭಾಷಾ ಸೌಹಾರ್ದತೆ, ಸಮಾನತೆ ಹಾಗೂ ಸಾಮಾಜಿಕ ಕಳಕಳಿ ಸಾಹಿತ್ಯದ ಮೂಲಕ ಆದರ್ಶ ತತ್ವಗಳನ್ನು ಸಾರಿದ ಅವರ ವಚನ ಸಾಹಿತ್ಯವನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಪಿ.ಸಿ ಮೋಹನ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿ.ಕೆ ರಾಮಮೂರ್ತಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.