ಬಂಟ್ವಾಳ: ಭಾರತೀಯ ಜನತಾ ಪಕ್ಷ, ಬಂಟ್ವಾಳ ಮಂಡಲದ ವತಿಯಿಂದ ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಪ್ರಯುಕ್ತ ಗೌರವಾರ್ಪಣಾ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸುವ ಮೂಲಕ ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು.  ಇದನ್ನೂ ಓದಿ :ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆಯನ್ನು ವಿರೋಧಿಸಿ ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ. ರೋಡ್ ನಲ್ಲಿ ಪ್ರತಿಭಟನೆ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಮಂಡಲದ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ, ಪ್ರಮುಖರಾದ ವಿಕಾಸ್ ಪುತ್ತೂರು, ಸುಲೋಚನಾ ಜಿ.ಕೆ.ಭಟ್, ಡೊಂಬಯ್ಯ ಅರಳ, ಮೋನಪ್ಪ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.

ಅಟಲ್ ಬಿಹಾರಿ ವಾಜಪೇಯಿ ಯವರ ಕುರಿತು ಬಿ.ಜೆ,ಪಿ. ನಾಯಕಿಯಾದ ಸುಲೋಚನಾ ಜಿ.ಕೆ.ಭಟ್, ಮಾತನಾಡಿದರು. ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ ರವರು ವಂದನಾರ್ಪಣೆ ಸಲ್ಲಿಸಿದರು.