ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಘಟಕವು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ “ಪತ್ರಿಕಾ ದಿನಾಚರಣೆ, ವಾರ್ಷಿಕ ದತ್ತಿ ಪ್ರಧಾನ ಸಮಾರಂಭ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ಸರ್ವ ಸದಸ್ಯರ ಮಹಾಸಭೆ” ಕಾರ್ಯಕ್ರಮವನ್ನು ಗೃಹ ಸಚಿವ ಡಾ| ಜಿ.ಪರಮೇಶ್ವರ್   ಉದ್ಘಾಟಿಸಿದರು. ಜಿಲ್ಲೆಯ ಪತ್ರಕರ್ತರಿಗೆ ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.   ಇದನ್ನೂ ಓದಿ : ವ್ಯಸನಗಳು  ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುತ್ತದೆ – ಶಿಕ್ಷಕಿ ಸಂಗೀತ ಶರ್ಮ
ಕೇಂದ್ರ ಸಚಿವರಾದ ವಿ.ಸೋಮಣ್ಣ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಾಜಿ ಶಾಸಕರಾದ ಗಂಗ ಹನುಮಯ್ಯ, ಪ್ರಜಾಪ್ರಗತಿ‌ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ನಾಗಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಹಾಗೂ ಪತ್ರಕರ್ತ ಮಿತ್ರರು ಉಪಸ್ಥಿತರಿದ್ದರು.