
ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಜೊತೆ ಪ್ರೇಮವಾಗಿತ್ತು. ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಆಕಾಂಕ್ಷಗೆ ಪ್ರೇಮಾಂಕುರವಾಗಿತ್ತು.
ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಆಕಾಂಕ್ಷ ಪೋಷಕರು ಕಾಲೇಜಿನವರೇ ನನ್ನ ಮಗಳಿಗೆ ಏನೋ ಮಾಡಿದ್ದಾರೆ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿಯಲ್ಲ ಎಂದು ಆರೋಪಿಸಿದ್ದರು. ಆದರೆ ಅಸಲಿ ವಿಚಾರ ಈಗ ಹೊರಬಿದ್ದಿದೆ.