ದೆಹಲಿ : ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರವರನ್ನು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಸಂಸದರ, ಶಾಸಕರ ನೇತೃತ್ವದ ನಿಯೋಗ ಭೇಟಿ ಮಾಡಿ, ರೈತರು, ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಇದನ್ನೂ ಓದಿ :ಹಾರ್ಮುಜ್ ದಾಳಿಗೆ ಪ್ರತೀಕಾರ: ಇರಾನ್‌ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್‌
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಯಾವುದೇ ಅನಗತ್ಯ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕರಾವಳಿಯ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸಂಸದ ಬಿ.ವೈ. ರಾಘವೇಂದ್ರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,ಶಾಸಕ ಆರಗ ಜ್ಞಾನೇಂದ್ರ ಅಡಿಕೆ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಡಿಕೆ ವಲಯದ ಪ್ರಮುಖರು ಉಪಸ್ಥಿತರಿದ್ದರು.
ಅಡಿಕೆ ಸಾಗಾಟದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು.