ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.
ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ
ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.