ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಗ್ಗ ವಲಯದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಧರ್ ಎಚ್. ಜಿ. ವಹಿಸಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಕಾರ್ಯಕ್ರಮದ ಉದ್ದೇಶದ ಬಗ್ಗೆ ಪ್ರಸ್ತಾವಿಕ ಮಾತಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆ. ಸಿ. ಐ. ತರಬೇತುದಾರ ಪತ್ರಕರ್ತ ಸಂದೀಪ್ ಸಾಲಿಯಾನ್ ದುಶ್ಚಟದಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ವಲಯದ ಜನ ಜಾಗೃತಿ ವೇದಿಕೆಯ ಸದಸ್ಯರಾದ ನವೀನ್ ಚಂದ್ರ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಮೋಹನ್ ದಾಸ್ ಗಟ್ಟಿ, ವಲಯ ಮೇಲ್ವಿಚಾರಕಿ ಸವಿತಾ , ಸೇವಾ ಪ್ರತಿನಿಧಿಗಳಾದ ಮಾಧವ, ಭಾರತಿ ಉಪಸ್ಥಿತರಿದ್ದರು.