
ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಸಿ.ಎಂ.ಸಿದ್ಧರಾಮಯ್ಯ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಹಾರೈಸಿದರು.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೂಡಿ ಸಿ.ಎಂ.ಸಿದ್ಧರಾಮಯ್ಯ ಅವರು ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
ಇದೇ ವೇಳೆ ಅಮೃತ್ಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಆಗಿ ಚಾಲನೆ ನೀಡಲಾಯಿತು.
ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೂಡಿ ಸಿಎಂ.ಸಿದ್ದರಾಮಯ್ಯ ಅವರು ದ್ಇಂದು ಲೋಕಾರ್ಪಣೆಗೊಳಿಸಿದೆ.
7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.
ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ.