ಕಲ್ಲಡ್ಕ : ಶ್ರೀ ರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ , ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ಇದರ ವತಿಯಿಂದ 20 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಜರಗಿತು.
ಪೂಜಾ ವೃತ ಕಾರ್ಯಕ್ರಮವನ್ನು ಸೂರ್ಯ ನಾರಾಯಣ ಭಟ್ ಕಶೆಕೋಡಿ ನೇತೃತ್ವದ ವೈದಿಕ ತಂಡ ನೆರವೇರಿಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ ಆಗಮಿಸಿ ಶುಭಕೋರಿದರು.
ನಂತರ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿ ರಾಜೇಶ್ವರಿ ಶ್ರೀ ವರಮಹಾಲಕ್ಷ್ಮಿ ಪೂಜಾ ವೃತ್ತದ ಆಚರಣೆ, ಅದರ ಮಹತ್ವದ, ಹಾಗೂ ರಕ್ಷಾಬಂಧನ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜ ಸಮಿತಿ ಅಧ್ಯಕ್ಷ ಸೌಮ್ಯ ವೇಣುಗೋಪಾಲ್, ಉಪಸ್ಥಿತರಿದ್ದರು.
ಪುಷ್ಪ ಆಚಾರ್ಯ ಪ್ರಾಥಿಸಿ, ಶಶಿಕಲಾ ಸ್ವಾಗತಿಸಿ, ಕುಸುಮಾವತಿ ಶೆಟ್ಟಿ ವಂದಿಸಿ, ಪ್ರೇಮ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.