ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ, ವಿಶ್ವಬ್ರಾಹ್ಮಣ ಸಮಾಜದ ಅಭಿವೃದ್ಧಿ ಹಾಗೂ ಲೋಕಕಲ್ಯಾಣಾರ್ಥ ವಿಶ್ವಕರ್ಮ ಯುವ ಮಿಲನ ಕರ್ನಾಟಕ ರಾಜ್ಯ ಆಶ್ರಯದಲ್ಲಿ “ವಿಶ್ವಕರ್ಮ ಮಹಾ ಯಜ್ಞ’ ಹಾಗೂ ಸಮಾಜದ ಸಂಘಟನೆಗಾಗಿ ನಡೆದ “ವಿಶ್ವಕರ್ಮ ಯುವ ಸಮಾವೇಶ’ದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಭಾಗವಹಿಸಿದರು.
ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಹಾಸನ ಜಿಲ್ಲೆ ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಸೇರಿದಂತೆ ಸಮಾಜದ ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.