ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆಯೋಜಿಸಲಾಗಿದ್ದ ಅಯೋಧ್ಯಾ ಬಾಲರಾಮ ಮಂಡಲೋತ್ಸವ ನೇತಾರ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದರು.

ಅಯೋಧ್ಯೆಯಲ್ಲಿ ಐತಿಹಾಸಿಕ ಬಾಲರಾಮನ ಪ್ರತಿಷ್ಠಾಪನಾ ಕಾರ್ಯ ಹಾಗೂ ಮಂಡಲೋತ್ಸವಗಳನ್ನು ವೈಭವದಿಂದ ಅತ್ಯಂತ ಯಶಸ್ವಿಯಾಗಿ ನೆರವೇರಿಸಿ ಆಗಮಿಸಿರುವ ಪೇಜಾವರ ಶ್ರೀಮಠದ ಪರಮಪೂಜ್ಯ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭಕ್ತಿಪೂರ್ವಕವಾಗಿ ಅಭಿನಂದಿಸಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಶ್ರೀಗಳು, ನಿವೃತ್ತ ಮುಖ್ಯ ನ್ಯಾಯಾಧೀಶರಾದ ಶ್ರೀ ಜಸ್ಟೀಸ್ ದಿನೇಶ್ ಕುಮಾರ್, ಸಂಸದರಾದ ಶ್ರೀ @Tejasvi_Surya, ಶಾಸಕರುಗಳಾದ ಶ್ರೀ ರವಿ ಸುಬ್ರಹ್ಮಣ್ಯ, ಶ್ರೀ @ckramamurthy , ಮಾಜಿ ಸಚಿವರಾದ ಶ್ರೀ @ArvindLBJP, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ.ರಾಜೇಂದ್ರ, ಬಿಜೆಪಿ ರಾಜ್ಯ ಖಜಾಂಚಿಗಳಾದ ಶ್ರೀ ಸುಬ್ಬನರಸಿಂಹ ಸೇರಿದಂತೆ ಅನೇಕ ಗಣ್ಯರು ಹಾಗೂ ಶ್ರೀರಾಮ ಭಕ್ತರು ಉಪಸ್ಥಿತರಿದ್ದರು.