ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ನಾಡಿನ ಜನರಿಗೆ ಸುಖ ಸಮೃದ್ಧಿ ದೊರೆಯಲೆಂದು ಪ್ರಾರ್ಥಿಸಿದರು.
ರಾಜ್ಯಾಧ್ಯಕ್ಷನಾದ ನಂತರದ ಮೊದಲ ಭಾರಿಯ ಶ್ರೀ ಕ್ಷೇತ್ರದ ಭೇಟಿ ಧನ್ಯತೆಯ ಭಾವ ಮೂಡಿಸಿತು, ಜವಾಬ್ದಾರಿ ನಿರ್ವಹಣೆಯ ಆತ್ಮವಿಶ್ವಾಸ ಹೆಚ್ಚಿಸಿತು ಎಂದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶಾಸಕರು ಹಾಗೂ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @HPoonja, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಬ್ರಿಜೇಶ್ ಚೌಟಾ, ಶ್ರೀ ಶರಣು ತಳ್ಳೀಕೆರೆ ಸೇರಿದಂತೆ ಸ್ಥಳೀಯ ಮುಖಂಡರು ಜೊತೆಗಿದ್ದರು.