ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪಿರಿಯಾಪಟ್ಟಣ ಹಾಗೂ ಹುಣಸೂರಿನಲ್ಲಿ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತ ಯಾಚನೆ ಮಾಡಲಾಯಿತು.

ಜನರಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ್ದ ಶ್ರೇಷ್ಠ ರಾಜ ಮನೆತನಕ್ಕೆ ಗೌರವ ಸಲ್ಲಿಸುವ ಮೂಲಕ ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ತರಲು ಸಂಕಲ್ಪ ತೊಟ್ಟಿರುವುದನ್ನು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಜನಸಾಗರ ಸಾಕ್ಷೀಕರಿಸಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H D Kumaraswamy , ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಶ್ರೀ ಎಸ್.ಎ ರಾಮದಾಸ್, ಶಾಸಕರಾದ ಶ್ರೀ ಜಿ.ಡಿ ಹರೀಶ್ ಗೌಡ, ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.