ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ಮಧುಕರ ಸಭಾಂಗಣದಲ್ಲಿ ಮೇ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಅಧ್ಯಕ್ಷರು ಆಗಿರುವ ಡಾ| ಪ್ರಭಾಕರ್ ಭಟ್‌ಕಲ್ಲಡ್ಕ ಅವರು ತುಳಸಿಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

“ತಂದೆತಾಯಿ ಮಗುವಿಗೆ ಜನ್ಮ ನೀಡಿ ಹೇಗೆ ಮಗುವನ್ನು ರಕ್ಷಿಸಿ ಪೋಷಿಸಿ ಬೆಳೆಸುತ್ತಾರೋ ಅದೇರೀತಿ ವಿದ್ಯಾರ್ಥಿಗಳಾದ ನೀವು ಕೂಡಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಕೆಲಸ ಮಾಡಬೇಕು.

ಶ್ರೀರಾಮ ಪ್ರೌಢ ಶಾಲೆ ಆರಂಭದಿಂದಲೂ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರವನ್ನು ಕೊಡುವ ಕೆಲಸವನ್ನು ಮಾಡುತ್ತಾ ಬಂದಿದೆ. ಇಲ್ಲಿ ಹೇಳಿಕೊಡುವ ಜೀವನ ಮೌಲ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಉಚಿತ ಸಮವಸ್ತ್ರ ವಿತರಿಸಲಾಯಿತು. ಪರಿಸರದ ಮಹತ್ವವನ್ನು ವಿದ್ಯಾರ್ಥಿನಿ ಅನನ್ಯ ತಿಳಿಸಿದಳು.

ಪ್ರಣಮ್ಯ ಸ್ವಾಗತಿಸಿ, ಕೀರ್ತಿ ವಂದಿಸಿದರು. ಕಾರ್ಯಕ್ರಮವನ್ನು ವೈಷ್ಣವಿ ಕಡ್ಯ ನಿರೂಪಿಸಿದರು. ವಿದ್ಯಾರ್ಥಿಗಳು ಪರಿಸರಗೀತೆಯನ್ನು ಹಾಡಿದರು. ಎಲ್ಲಾ ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆಯ ಘೋಷಣೆಗಳನ್ನು ಹೇಳಿಸಲಾಯಿತು.